ಬಹುಭಾಷಾ ನಟ ಶರತ್ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರತ್ಕುಮಾರ್ ಡಯಾರಿಯಾ, ಡಿಹೈಡ್ರೇಷನ್ನಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ.
68ನೇ ವರ್ಷ ವಯಸ್ಸಿನ ನಟ ಶರತ್ಕುಮಾರ್ ಅವರನ್ನು ಅನಾರೋಗ್ಯದ ಹಿನ್ನೆಯಲ್ಲಿ ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರತ್ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದಂತೆಯೇ ತಕ್ಷಣವೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಶರತ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಕುರಿತು ಅವರ ಕುಟುಂಬದವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಅತ್ತ ಆಸ್ಪತ್ರೆ ಕಡೆಯಿಂದಲೂ ಯಾವುದೇ ಹೆಲ್ತ್ ಬುಲೆಟಿನ್ ಕೂಡ ರಿಲೀಸ್ ಆಗಿಲ್ಲ. ಈ ಹಿಂದೆ ಶರತ್ಕುಮಾರ್ ಅವರಿಗೆ ಕೊರೊನಾ ವೈರಸ್ ತಗುಲಿತ್ತು. ಇದೀಗ ಮತ್ತೊಂದು ಗಂಭೀರ ಆರೋಗ್ಯ ಸಮಸ್ಯೆಯಿಂದ ಶರತ್ಕುಮಾರ್ ಬಳಲುತ್ತಿದ್ದು, ಶೀಘ್ರವೇ ಅವರು ಗುಣಮುಖರಾಗಲಿ ಎಂದು ಅವರ ಆಪ್ತರು, ಸ್ನೇಹಿತರು, ಅಭಿಮಾನಿಗಳು ಹಾರೈಸಿದ್ದಾರೆ.