ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಿಟೌನ್ ಸಿನಿ ರಂಗದಲ್ಲಿ ಸದ್ದು ಮಾಡುತ್ತಿರುತ್ತಾರೆ. ಇಷ್ಟು ದಿನಗಳ ಕಾಲ ಸಿನಿಮಾದ ಮೂಲಕ ಸದ್ದು ಮಾಡುತ್ತಿದ್ದ ನಟಿ ಜಾನ್ವಿ ಇದೀಗ ಫರ್ಸನಲ್ ವಿಷಯದಲ್ಲಿ ಸುದ್ದಿಯಾಗಿದ್ದಾರೆ. ಸದ್ಯ ಜಾನ್ವಿ ಕಪೂರ್ ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗ ಶಿಖರ್ ಪಹಾರಿಯಾ ಜೊತೆ ಮಾಲ್ಡೀವ್ಸ್ಗೆ ಹಾರಿದ್ದಾರೆ ಎಂಬ ಸುದ್ದಿ ಬಿಟೌನ್ನಲ್ಲಿ ಹರಿದಾಡುತ್ತಿದೆ. ಮಾಜಿ ಗೆಳೆಯನ ಜೊತೆ ನಟಿ ಹಾಲೀಡೇ ಎಂಜಾಯ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗೆ ನಟಿ ಜಾನ್ವಿ ಮಾಲ್ಡೀವ್ಸ್ನಲ್ಲಿ ಕಳೆದ ತಮ್ಮ ಬೋಲ್ಡ್ ಫೋಟೋಗಳನ್ನ ಶೇರ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದರು. ಈಗ ನಟಿಯ ಬಗ್ಗೆ ಹೊಸ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರ ಮಾಜಿ ಸಿಎಂ ಮೊಮ್ಮಗ ಶಿಖರ್ ಜೊತೆ ನಟಿ ಡೇಟ್ ಮಾಡ್ತಿದ್ದಾರೆ. ಇಬ್ಬರು ಮಾಲ್ಡೀವ್ಸ್ನ ಫೋಟೋ ಶೇರ್ ಮಾಡಿರುವುದೇ ಈ ಅನುಮಾನಕ್ಕೆ ಕಾರಣವಾಗಿದೆ.
ಸುಶೀಲ್ಕುಮಾರ್ ಶಿಂಧೆ ಅವರ ಮೊಮ್ಮಗ ಶಿಖರ್ ಪಹಾರಿಯಾ. ಈ ಮೊದಲು ಜಾನ್ವಿ ಮತ್ತು ಶಿಖರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದರು. ಆದರೆ ಬಳಿಕ ಬ್ರೇಕಪ್ ಮಾಡಿಕೊಂಡು ದೂರ ಆಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ, ಮಾಲ್ಡೀವ್ಸ್ ಪ್ರವಾಸ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಖತ್ ಸದ್ದು ಮಾಡುತ್ತಿದೆ.