ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಕಾಂಬಿನೇಷನ್ ನ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದೆ. ಈಗಾಗಲೇ ಭರದಿಂದ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಚಿತ್ರಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ. ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅದ್ಧೂರಿಯಾಗಿ ನಿರ್ಮಿಸುತ್ತಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಇದೀಗ ಬಾಲಿವುಡ್ ನ ಖ್ಯಾತ ನಟನೆ ಎಂಟ್ರಿಯಾಗಿದೆ.
ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ಇತ್ತೀಚೆಗೆ ಸೌತ್ ಸಿನಿಮಾಗಳತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜುಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.
ಗಡ್ಡ ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಮುಂದಾಗಿದ್ದಾರೆ.