ಖ್ಯಾತ ನಟಿ ಕೀರ್ತಿ ಸುರೇಶ್ , ದಳಪತಿ ವಿಜಯ್ ಜೊತೆಗಿನ ಮದುವೆ ವಿಚಾರವಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಕೀರ್ತಿ ಸುರೇಶ್ ತಾಯಿ ಮೇನಕಾ ಮಗಳ ಮದುವೆ ಸುದ್ದಿಯ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಕೀರ್ತಿ ಇದೀಗ ವೈಯಕ್ತಿಯ ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಕಳೆದ ಕೆಲ ದಿನಗಳಿಂದ ದಳಪತಿ ವಿಜಯ್ ಜೊತೆ ನಟಿ ಕೀರ್ತಿ ಸುರೇಶ್ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಭಾರಿಗೆ ಕೀರ್ತಿ ತಾಯಿ ಸ್ಪಷ್ಟನೆ ನೀಡಿದ್ದಾರೆ.
ಭೈರವ, ಸರ್ಕಾರ್ ಸಿನಿಮಾಗಳಲ್ಲಿ ಜೋಡಿಯಾಗಿ ವಿಜಯ್, ಕೀರ್ತಿ ನಟಿಸಿದ್ದರು. ಹಾಗಾಗಿ ಈ ಮದುವೆ ಸುದ್ದಿ ಹಬ್ಬಿತ್ತು. ಈ ಕಡೆ ಪತ್ನಿ ಸಂಗೀತಾಗೆ ವಿಜಯ್ ಡಿವೋರ್ಸ್ ಕೊಡುತ್ತಾರೆ ಎಂಬ ಸುದ್ದಿ ವೈರಲ್ ಆಗ್ತಿದ್ದಂತೆ ಕೀರ್ತಿ ಜೊತೆ 2ನೇ ಮದುವೆ ವಿಚಾರ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು.
ಕೆಲವು ದಿನಗಳಿಂದ ಓಡಾಡುತ್ತಿರುವ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ. ಇದು ಕೇವಲ ಪ್ರಚಾರಕಷ್ಟೇ. ಇದೆಲ್ಲಾ ಕೇವಲ ಗಾಳಿ ಸುದ್ದಿ ಅಷ್ಟೇ ಎಂದು ಕೀರ್ತಿ ತಾಯಿ ಮೇನಕಾ ಸುರೇಶ್ ಮದುವೆಯ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮಗಳ ಮದುವೆ ಬಗ್ಗೆ ಯಾವುದೇ ರೀತಿಯ ಪ್ಲ್ಯಾನ್ ಮಾಡಿಲ್ಲ ಎಂಬುದನ್ನ ಸ್ಪಷ್ಟಪಡಿಸಿದ್ದಾರೆ.