ಮುಂಬೈ: ಇಂದಿನಿಂದ ಪ್ರತಿಷ್ಠಿತ ಐಪಿಎಲ್ 16ನೇ ಆವೃತ್ತಿ ಆರಂಭಗೊಳ್ಳಲಿದೆ. ಈ ಭಾರಿ ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಬ್ಯೂಟಿ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟಿ ತಮನ್ನಾ ಸೊಂಟ ಬಳುಕಿಸಲಿದ್ದಾರೆ.
ಇಂದು ಸಂಜೆ 730ಕ್ಕೆ ಗುಜರಾತ್ ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪಂದ್ಯ ಆರಂಭವಾಗಲಿದ್ದು, ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಲಿದ್ದಾರೆ.
ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಬಾಲಿವುಡ್ ತಾರೆಯರಾದ ಕಿಯಾರಾ ಅಡ್ವಾಣಿ ಹಾಗೂ ಕೃತಿ ಸನೋನ್ ಭರ್ಜರಿ ಡಾನ್ಸ್ ಮಾಡಿ ಗಮನ ಸೆಳೆದಿದ್ದರು. ಇದೀಗ 16ನೇ ಐಪಿಎಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ತಮನ್ನಾ ಹಾಗೂ ರಶ್ಮಿಕಾ ಭರ್ಜರಿ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಇದರೊಂದಿಗೆ ಸ್ಟಾರ್ ಸಿಂಗರ್ ಅರ್ಜಿತ್ ಸಿಂಗ್ ಸಹ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈ ಬಗ್ಗೆ ಐಪಿಎಲ್ ಸಮಿತಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.